ಉಡುಪಿ,(ಜನವರಿ 30 ): ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಪ್ರತಿಭಾನ್ವಿತ ಬಾಲಕಿಯರಿಗೆ ಜಿಲ್ಲಾ ಪಂಚಾಯತ್ ಅಧೀನ ವಿವಿಧ ಇಲಾಖೆಗಳ ಕಾರ್ಯವೈಖರಿ ಹಾಗೂ ಯೋಜನೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಉದ್ಘಾಟಿಸಿದರು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ವೈ, ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶೇಷಪ್ಪ ಹಾಗೂ ವಿವಿಧ ಇಲಾಖೆಗಳ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.