ದಿನಾಂಕ : 30 -07-2021) ಮತ್ತು 31-07-2020 , ರಂದು ಬೆಳಿಗ್ಗೆ 10:30 ರಿಂದ 11:50 ಮತ್ತು ಮಧ್ಯಾಹ್ನ 02:30 ರಿಂದ 03:50 ರವರೆಗೆ ಉಡುಪಿ ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆ 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗೆ ಒಟ್ಟು 3915 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುತ್ತಾರೆ. 1854 ಬಾಲಕರು ಹಾಗೂ 2011 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ.

ಕೋವಿರ್-19 ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸೋಂಕು ಲಕ್ಷಣಗಳನ್ನು ಪರೀಕ್ಷಿಸಿ, ಪರೀಕ್ಷಾ ಕೇಂದ್ರದ ಒಳಗೆ ಬಿಡಬೇಕಾಗಿರುವುದರಿಂದ ವಿದ್ಯಾರ್ಥಿಗಳು ಕಡ್ಡಾಯವಾಗಿ ಬೆಳಿಗ್ಗೆ 09.00 ಗಂಟೆಗೆ ಪರೀಕ್ಷಾ ಕೇಂದ್ರದಲ್ಲಿ ಇರಲು ಸೂಚಿಸಲಾಗಿದೆ.

ಜಿಲ್ಲೆಯಲ್ಲಿ ಸಿಇಟಿ ಒಟ್ಟು 10 ಪರೀಕ್ಷಾ ಕೇಂದ್ರಗಳಿದ್ದು, ಕಾರ್ಕಳ ತಾಲೂಕಿನಲಿ; 02, ಉಡುಪಿ ತಾಲೂಕಿನಲ್ಲಿ05, ಮತ್ತು ಕುಂದಾಪುರ ತಾಲೂಕಿನಲ್ಲಿ 03, ಪರೀಕ್ಷಾ ಕೇಂದ್ರ ಮಾಡಲಾಗಿದೆ. ಪ್ರತಿ ಕೇಂದ್ರದಲ್ಲಿ 01 ವಿಶೇಷ ಕೊಠಡಿಯನ್ನು ತೆರೆಯಲಾಗಿದ್ದು, ಸಾಮಾನ್ಯ ಶೀತ,ಕೆಮ್ಮು ಜ್ವರ, ನೆಗಡಿ ಇಂತಹ ಲಕ್ಷಣಗಳಿರುವ ಪರೀಕ್ಷಾ ವಿದ್ಯಾರ್ಥಿಗಳಿಗೆ ಉಪಯೋಗಿಸಲಾಗುವುದು.

ಕೋಪಿಕ್ -19 ಜೊಸೆಟಿವ್ ಬಂದಿರುವ ವಿದ್ಯಾರ್ಥಿಗಳಿಗೆ ಅದೇ ದಿನದಂದು ಪರೀಕ್ಷೆ ಬರೆಯಲು, 03 ತಾಲೂಕಿಗೆ ಒಂದರಂತೆ ಪ್ರತ್ಯೇಕವಾಗಿ ಕೋಪಡ್ ಕೇರ್ ಸೆಂಟರ್‌ನಲ್ಲಿ ಪರೀಕ್ಷೆ ಬರೆಯಲಾಗುವುದು. ಕಾರ್ಕಳ ತಾಲೂಕಿನಲ್ಲಿ ಶ್ರೀ ಭುವನೇಂದ್ರ ವಸತಿ ನಿಲಯ, ಉಡುಪಿ ತಾಲೂಕಿನಲ್ಲಿ ಸಮಾಜ ಕಲ್ಯಾಣ ವಸತಿ ನಿಲಯ ಬನ್ನಂಜೆ.ಉಡುಪಿ, ಮತ್ತು ಕುಂದಾಪುರ ತಾಲೂಕಿನಲ್ಲಿ ಶ್ರೀ ದೇವರಾಜು ಅರಸು ವಸತಿ ನಿಲಯ.ಕುಂದಾಪುರ ಇಲ್ಲಿ ತೆರೆಯಲಾಗಿದೆ ಹಾಗೂ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಉಡುಪಿ ಒಂದು ಹೆಚ್ಚುವರಿ ಪರೀಕ್ಷಾ ಕೇಂದ್ರವಾಗಿ ಕಾಯ್ದಿರಿಸಲಾಗಿದೆ.

ಪರೀಕ್ಷಾ ಕೇಂದ್ರಗಳಿಗೆ ಸೋಂಕು ನಿವಾರಣಾ ದ್ರಾವಣ ಸಿಂಪಡಿಸಿ ಪರೀಕ್ಷಾ ಕೇಂದ್ರದ ಕೊಠಡಿ ಮತ್ತು ಡೆಸ್ತುಗಳನ್ನು ಸ್ವಚ್ಚಗೊಳಿಸಿ ಶುದ್ದಿಕರೀಸಲಾಗಿದೆ. ಪರೀಕ್ಷಾ ಕೇಂದ್ರದ ಒಳಗೆ ಬರುವಾಗ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸಿಬ್ಬಂದಿಗಳಿಂದ ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಿ, ನೀರು ಮತ್ತು ಸಾಬೂನುನಿಂದ ಕೈತೊಳೆದು , ಮಾಸ್ಕ್ ಧರಿಸಿಕೊಂಡು ಪರೀಕ್ಷಾ ಕೊಠಡಿಗೆ ಪ್ರವೇಶ ನೀಡಲಾಗುವುದು ಎಂದು ಜಿಲ್ಲಾ ಉಪನಿರ್ದೇಶಕರಾದ ಶ್ರೀ ಭಗವಂತ ಕಟ್ಟಿಮನಿ ಇವರು ಪತ್ರಿಕಾ ಪ್ರಕಟಣೆ ನೀಡಿರುತ್ತಾರೆ.