ದಕ್ಷಿಣ ಕನ್ನಡ:- ಹೊಕ್ಕಡಿಗೋಳಿ ಮಹಿಷಮರ್ಧಿನಿ ಕಂಬಳ ಸಮಿತಿ ಇದರ ವತಿಯಿಂದ ನಡೆದ ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕೆರೆ ಬಯಲು ಕಂಬಳಕ್ಕೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರು ಭೇಟಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.