ದೇಶದಲ್ಲಿ ಶುಕ್ರವಾರ ಒಂದೇ ದಿನ ದಾಖಲೆಯ 26,506 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 8 ಲಕ್ಷ ಗಡಿ ಸಮೀಪ ಬಂದಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದ ಅಂಕಿ-ಅಂಶಗಳ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 7,93,802 ಆಗಿದ್ದು, 475 ಮಂದಿ ಕೊರೊನಾಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 21,604ಕ್ಕೆ ಏರಿಕೆಯಾಗಿದೆ.
2,76,685 ಸಕ್ರಿಯ ಪ್ರಕರಣಗಳಿದ್ದು, 4,95,513 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.