ಉಡುಪಿ,(ಡಿಸೆಂಬರ್ 30) : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆಯಂತ್ರ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜನವರಿ 15 ರ ಒಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ‘ಸಿ’ ಬ್ಲಾಕ್, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ ರಜತಾದ್ರಿ, ಮಣಿಪಾಲ, ಉಡುಪಿ ಇವರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0820-2574810/811 ಅನ್ನು ಸಂಪರ್ಕಿಸುವAತೆ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.