ಉಡುಪಿ ಫೆಬ್ರವರಿ 11 : ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿ, ಖಾಸಗಿ ವಾಣಿಜ್ಯ ಸಾರಿಗೆ ವಾಹನಗಳ ನಿರ್ವಾಹಕ ಹಾಗೂ ಕ್ಲೀನರ್‌ಗಳ ನೋಂದಣಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಜಿಲ್ಲಾ ಕಾರ್ಮಿಕ ಅಧಿಕಾರಿ ಕಚೇರಿ ಹಾಗೂ ತಾಲೂಕು ಕಾರ್ಮಿಕ ನಿರೀಕ್ಷಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಸೂಕ್ತ ದಾಖಲೆಯೊಂದಿಗೆ ಕಾರ್ಮಿಕ ಅಧಿಕಾರಿಗಳ ಕಚೇರಿ, ಉಡುಪಿ ಉಪ ವಿಭಾಗ, ರಜತಾದ್ರಿ, ಮಣಿಪಾಲ ಉಡುಪಿ, ಇಲ್ಲಿ ನೋಂದಾಯಿಸಿಕೊ0ಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.