ಮೈಸೂರು: ಶಾಲೆ ಆರಂಭದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದು, "ಸೆಪ್ಟೆಂಬರ್ 21 ರಂದು ಶಾಲೆ ತರಗತಿ ಆರಂಭ ಇಲ್ಲ" ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, "ಸೆಪ್ಟೆಂಬರ್ 21 ರಿಂದ ಶಾಲೆ ಆರಂಭವಾಗಲಿದ್ದು, ತರಗತಿ ಆರಂಭ ಆಗಲ್ಲ. ಸೆಪ್ಟೆಂಬರ್ 21 ರಿಂದ ಕೇವಲ ಶಾಲೆ ತೆರೆಯಲಿದ್ದು, ಪ್ರವೇಶಾತಿ ಪ್ರಕ್ರಿಯೆ ನಡೆಯಲಿದೆ. ಸೆಪ್ಟೆಂಬರ್30 ರೊಳಗೆ ಪ್ರವೇಶಾತಿ ಪ್ರಕ್ರಿಯೆ ಮುಗಿಸಬೇಕು 1-10 ನೇತರಗತಿ ಪ್ರವೇಶ ನಡೆಯಲಿದೆ" ಎಂದರು.
"ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿ ಮಾಡುತ್ತಿದ್ದಾರೆ. ಎಷ್ಟೇ ಮಕ್ಕಳು ಬಂದರೂ ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುತ್ತೇವೆ. ಖಾಸಗಿ ಶಾಲೆಯಿಂದ ಟಿಸಿ ಕೊಡದಿದ್ದರೆ, ಬಿಇಓಯಿಂದ ಕೊಡಿಸುವ ವ್ಯವಸ್ಥೆ ಮಾಡುತ್ತೇವೆ" ಎಂದು ಎಚ್ಚರಿಕೆ ನೀಡಿದರು.
"ಖಾಸಗಿ ಶಾಲೆಗಳು ಕೇವಲ ಒಂದು ಅವಧಿಯ ಶುಲ್ಕವನ್ನು ಮಾತ್ರ ಪೋಷಕರಿಂದ ಪಡೆಯಬೇಕು. ಆಗೊಮ್ಮೆ ಸಮಸ್ಯೆಯಾದರೆ ಡಿಡಿಪಿಐ ಬಿಇಓ ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ. ಅವರಿಗೆ ಈಗಾಗಲೇ ಸರ್ಕಾರದಿಂದ ಸೂಚನೆ ಕೊಟ್ಟಿದ್ದೇವೆ. ಯಾವುದೇ ಪೋಷಕರಿಗೆ ಇದರಿಂದ ಸಮಸ್ಯೆಯಾದರೆ ಕೂಡಲೇ ಬಿಇಓ ಅವರನ್ನು ಸಂಪರ್ಕಿಸಿ" ಎಂದರು.