ಮಂಗಳೂರು (ಜೂ. 29): ದ.ಕ. ಜಿಲ್ಲೆಯಲ್ಲಿ ಮತ್ತೆ 32 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಪ್ರಾಥಮಿಕ ಸಂಪರ್ಕದಿಂದಲೇ ಹೆಚ್ಚಿನ ಪಾಸಿಟಿವ್ ಪತ್ತೆಯಾಗಿದೆ. ಪ್ರಾಥಮಿಕ ಸಂಪರ್ಕದಿಂದ 10 ಮಂದಿಗೆ ಪಾಸಿಟಿವ್ ಪತ್ತೆಯಾಗಿದೆ. ದ್ವಿತೀಯ ಸಂಪರ್ಕದಿಂದ ಓರ್ವ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ.  ಇನ್ನು ILI ಪ್ರಕರಣದಿಂದ 9 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. SARI ಪ್ರಕರಣದಿಂದ 6 ಮಂದಿಗೆ ಪಾಸಿಟಿವ್ ಪತ್ತೆಯಾಗಿದೆ. 5 ಮಂದಿಯ ಕೊರೊನಾ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ. ಅಂತರ್ ರಾಜ್ಯದಿಂದ ಬಂದ ಓರ್ವ ವ್ಯಕ್ತಿಯಲ್ಲಿ ಪಾಸಿಟಿವ್ ಕಂದುಬಂದಿದೆ.

     458 ಮಂದಿಯ ವರದಿ ಸೋಮವಾರ ಲಭ್ಯವಾಗಿದ್ದು, 426 ಮಂದಿಯ ವರದಿ ನೆಗೆಟಿವ್ ಬಂದಿದೆ. ಸೋಮವಾರ ನಾಲ್ವರು ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದು, ಆ ಮೂಲಕ ಜಿಲ್ಲೆಯಲ್ಲಿ ಒಟ್ಟು 426 ಮಂದಿ ಗುಣಮುಖರಾದಂತಾಗಿದೆ. 265 ಮಂದಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಇನ್ನು ಇಲ್ಲಿಯ ತನಕ ಜಿಲ್ಲೆಯಲ್ಲಿ ಒಟ್ಟು 695 ಪ್ರಕರಣಗಳು ಪಾಸಿಟಿವ್ ಆಗಿವೆ.

ಉಡುಪಿ (ಜೂ. 29): ಜಿಲ್ಲೆಯಲ್ಲಿ ಮತ್ತೆ 18 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಬಗ್ಗೆ ಉಡುಪಿ ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ಅಧಿಕೃತ ಮಾಹಿತಿ ನೀಡಿದ್ದಾರೆ.ಈ ಪೈಕಿ ಮಹಾರಾಷ್ಟ್ರದಿಂದ ಬಂದ 5 ಜನರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಬೆಂಗಳೂರಿನಿಂದ ವಾಪಾಸಾಗಿದ್ದ ನಾಲ್ವರಲ್ಲಿ ಸೋಂಕು ಧೃಡಪಟ್ಟಿದೆ. ಅಲ್ಲದೆ, ಉಡುಪಿಯ 9 ಜನರಲ್ಲಿ ಕೊರೊನಾ ಇರುವುದು ತಿಳಿದುಬಂದಿದೆ.
      ಎಲ್ಲಾ ಸೋಂಕಿತರಿಗೂ ಪ್ರಾಥಮಿಕ ಸಂಪರ್ಕದಿಂದ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆಯ ವರದಿ ತಿಳಿಸಿದೆ. ಹೆಬ್ರಿ ಸಮುದಾಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನರ್ಸ್ ಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಅವರನ್ನು ಸದ್ಯ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಇನ್ನು ಉಡುಪಿಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 1197ಕ್ಕೆ ಏರಿಕೆಯಾಗಿದೆ. 150 ಮಂದಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ.