ಉಡುಪಿ : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ , ಉಡುಪಿ ನಗರದೆಲ್ಲಡೆ ಗಿಡಗಳನ್ನು ಬೆಳೆಸಿ, “ಹಸಿರು ಉಡುಪಿ” ನಿರ್ಮಾಣ ಉದ್ದೇಶದಿಂದ ಅರಣ್ಯ ಇಲಾಖೆವತಿಯಿಂದ ಆರಂಭಿಸಿರುವ ಗಿಡ ನಡೆವ ಕಾರ್ಯಕ್ರಮಕ್ಕೆ ಅಂಬಲಪಾಡಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ , ಗಿಡ ನೆಡುವ ಮೂಲಕ ಚಾಲನೆ ನೀಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಹೆದ್ದಾರಿಯಲ್ಲಿ ಗಿಡಗಳನ್ನು ನೆಡುವುದು ಮಾತ್ರವಲ್ಲದೇ ಅವುಗಳನ್ನು ಪಾಲನೆ ಪೋಷಣೆ ಸಹ ಮುಖ್ಯ, ಜಾಗತಿಕ ತಾಪಮಾನ ಹೆಚ್ಚಿರುವ ಈ ಕಾಲದಲ್ಲಿ ಗಿಡ ಗಳನ್ನು ನೆಟ್ಟು ಪೋಷಿಸುವ ಮೂಲಕ ಸಮಸ್ತ ಜೀವ ಸಂಕುಲಕ್ಕೆ ಪೂರಕ ವಾತಾವರಣ ನಿರ್ಮಾಣ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ, ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯವರು ನಡೆಸುತ್ತಿರುವ ಈ ಕಾರ್ಯ ಶ್ಲಾಘನೀಯ ಎಂದರು.
ನಗರಸಭಾ ಸದಸ್ಯ ಹರೀಶ್ ಶೆಟ್ಟಿ ,ಉಡುಪಿ ವಲಯದ ಉಪ ಅರಣ್ಯ ವಲಯಾಧಿಕಾರಿ ಗುರುರಾಜ ಕಾವ್ರಾಡಿ , ಅರಣ್ಯ ರಕ್ಷಕ ದೇವರಾಜ ಪಾಣ ಉಪಸ್ಥಿತರಿದ್ದರು.
ವಿಶ್ವ ಪರಿಸರ ದಿನದ ಅಂಗವಾಗಿ ಅರಣ್ಯ ಇಲಾಖೆಯಿಂದ ಉಡುಪಿಯ ಕಿನ್ನಿಮೂಲ್ಕಿಯಿಂದ ಅಂಬಾಗಿಲು ವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ 2800 ಗಿಡಗಳನ್ನು ನೆಟ್ಟು ಪೋಷಿಸಲಾಗುತ್ತಿದೆ.