ಉಡುಪಿ (ಸೆಪ್ಟೆಂಬರ್, 10): ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಸ್ತುತ ಸಾಲಿನಲ್ಲಿ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಸಾಂಸ್ಕೃತಿಕ, ಕಲೆ, ಸಂಗೀತ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರೆಂದು ಸಮರ್ಥಿಸಲು ಪೂರಕ ದಾಖಲೆಗಳನ್ನು ಅಕ್ಟೋಬರ್ 15 ರ ಒಳಗೆ ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ ಮಣಿಪಾಲ ಇವರಿಗೆ ಸಲ್ಲಿಸಬೇಕು.

    ಆಯ್ಕೆಯಾದ ಮಗುವಿಗೆ ತಲಾ 10,000 ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪನಿರ್ದೇಶಕರ ಕಛೇರಿ, ದೂರವಾಣಿ ಸಂಖ್ಯೆ: 0820-2574978, 0820-2574972 ನ್ನು ಸಂಪರ್ಕಿಸುವAತೆ ಇಲಾಖೆಯ ಪ್ರಕಟಣೆ ತಿಳಿಸಿದೆ.