ಮಂಗಳೂರಿನಲ್ಲಿ 7,500 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಲ್ಲಿ ರಸಗೊಬ್ಬರ ಕಾರ್ಖಾನೆ ಆರಂಭವಾಗಲಿದ್ದು, ಅದರಿಂದ 10,000 ಉದ್ಯೋಗ ಸೃಷ್ಟಿಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮಂತ್ರಿ ಮುರುಗೇಶ್ ನಿರಾಣಿ ಹೇಳಿದರು.
ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯು ಆಯೋಜಿಸಿದ್ದ ಕೈಗಾರಿಕಾ ಸಾಧ್ಯತಾ ಮೇಳದಲ್ಲಿ ಅವರು ಮಾತನಾಡಿದರು. ಸದ್ಯದಲ್ಲೇ ಹೂಡಿಕೆ ಸಮಾವೇಶ ನಡೆಯಲಿದ್ದು, ಮಂಗಳೂರಿನಲ್ಲಿ ರಸಗೊಬ್ಬರ ಕಾರ್ಖಾನೆಯಲ್ಲಿ ಹೂಡಿಕೆ ಮಾಡಲು ಹಲವರು ಆಸಕ್ತಿ ಹೊಂದಿರುವುದಾಗಿ ನಿರಾಣಿಯವರು ಹೇಳಿದರು.