ಕೊರೋನಾ ಕಾರಣದಿಂದ ಏಪ್ರಿಲ್ ತಿಂಗಳಿನಲ್ಲಿ 75 ಲಕ್ಷ ಜನ ಉದ್ಯೋಗ ಕಳೆದುಕೊಂಡರು ಎಂದು ಸಿಎಂಐಇ- ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ ತಿಳಿಸಿದೆ.
ಇದೇ ಅವಧಿಯಲ್ಲಿ ನಿರುದ್ಯೋಗ ಸಮಸ್ಯೆಯು ಎಂಟು ತಿಂಗಳ ಗರಿಷ್ಟ 8 ಶೇಕಡಾ ತಲುಪಿದೆ. ಸದ್ಯ ನಗರ ಪ್ರದೇಶದಲ್ಲಿ 9.78% ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 7.13% ನಿರುದ್ಯೋಗ ದರ ಉಲ್ಬಣಗೊಂಡಿರುವುದಾಗಿ ಈ ವರದಿಯಲ್ಲಿ ಹೇಳಲಾಗಿದೆ.