ಮಂಗಳೂರು: ಶಕ್ತಿ ನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ನಡೆದ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಸೂರಜ್‍ಎಜ್ಯುಕೇಶನಲ್‍ ಚಾರಿಟೇಬಲ್ ಟ್ರಸ್ಟ್‍ ನಅಧ್ಯಕ್ಷರು ಹಾಗೂ ರುಪ್ಸಾ ಕರ್ನಾಟಕ ರಾಜ್ಯ ಉಪಾಧ್ಯಕ್ಷರು ಆದ ಡಾ. ಮಂಜುನಾಥ್ ರೇವಣ್ಣ ನೆರವೇರಿಸಿ , ಡಾ.ಅಂಬೇಡ್ಕರ್ ಮತ್ತು ಡಾ. ರಾಜೇಂದ್ರ ಪ್ರಸಾದ್‍ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಭಾರತ ನಮ್ಮ ತಾಯ್ನಾಡು. ನಮ್ಮನ್ನು ಹೆತ್ತತಾಯಿ ಬೇರೆ ಬೇರೆಯಾಗಿದ್ದರೂ ನಮ್ಮೆಲ್ಲರನ್ನು ಹೊತ್ತು ಬೆಳೆಸುವ ತಾಯಿ ಈ ಭಾರತ ಮಾತೆ. ಈ ದೇಶದ ಒಳಿತಿಗಾಗಿ ಶ್ರಮಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪ್ರತಿಯೊಂದು ಮಗುವಿನಲ್ಲೂ ಒಂದು ಶಕ್ತಿ ಇದೆ. ಒಂದಲ್ಲ ಒಂದು ರೀತಿಯಲ್ಲಿ ಅದು ಅವನ ವ್ಯಕ್ತಿತ್ವದಲ್ಲಿ ತೋರುತ್ತದೆ. ಆ ಶಕ್ತಿಯೇ ಅವರನ್ನು ಮುಂದಕ್ಕೆ ಸಮಾಜದಲ್ಲಿ ಒಂದು ಸ್ಥಾನವನ್ನು ಗಳಿಸಲು ಪ್ರೇರೇಪಿಸುತ್ತದೆ ಎಂದರು. ಈ ಸಂದರ್ಭದಲ್ಲಿ SGFI ಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. 

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ.ಕೆ.ಸಿ.ನಾೈಕ್ ವಹಿಸಿದರು. ಕಾರ್ಯಕ್ರಮದಲ್ಲಿ ಶಕ್ತಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ಬಬಿತಾ ಸೂರಜ್ ಉಪಸ್ಥಿತರಿದ್ದರು. ಉಪನ್ಯಾಸಕಿ ಪ್ರಿಯಾಂಕರೈರವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.