ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದಿರೆ ತಾಲೂಕಿನ ಅಳಿಯೂರು ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಸರಕಾರದಿಂದ ಉಚಿತವಾಗಿ ನೀಡಲ್ಪಡುವ ಶೂ, ಸಾಕ್ಸ್ ಹಾಗೂ ಸಮವಸ್ತ್ರವನ್ನು ವಿತರಿಸಲಾಯಿತು.
ಶಾಸಕ ಉಮಾನಾಥ ಕೋಟ್ಯಾನ್ ಅವರು ವಿದ್ಯಾರ್ಥಿಗಳಿಗೆ ಸರಕಾರದ ಈ ಉಚಿತ ಸೌಲಭ್ಯಗಳನ್ನು ವಿತರಿಸಿದರು. ತರುವಾಯ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಅನಗತ್ಯ ಸಮಯವನ್ನು ವ್ಯರ್ಥ ಮಾಡದೆ, ಮೊಬೈಲ್ಗಳಲ್ಲಿ ಕಾಲ ಕಳೆಯುವ ಬದಲು, ಓದುವಿಕೆಗೆ ಹೆಚ್ಚಿನ ಪ್ರಶಸ್ತಿಯನ್ನು ಕೊಡಬೇಕು ಎಂದು ಕೇಳಿಕೊಂಡರು. ಸರಕಾರ ನೀಡುತ್ತಿರುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಯೋಗ್ಯ ರೀತಿಯಲ್ಲಿ ಬಳಸಿಕೊಂಡು ವಿದ್ಯಾಭ್ಯಾಸದಲ್ಲಿಯು ಕೂಡ ಉತ್ತಮ ಅಂಕಗಳನ್ನು ಪಡೆಯಲು ಸದಾ ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದರು. ಶಾಲಾ ಅಧ್ಯಾಪಕವರಿಂದ ಕಾರ್ಯಕ್ರಮವನ್ನು ಸಂಘಟಿಸಿದರು.