ಮಂಗಳೂರು:  ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಮಾತನಾಡುತ್ತಾ, “ಮುಖ್ಯಮಂತ್ರಿ ಸಿದ್ದರಾಮಯ್ಯರವರು 24 ಜನರನ್ನು ಹತ್ಯೆ ಮಾಡಿದ್ದಾರೆ” ಎಂದು ಸುಳ್ಳು ಆರೋಪ ಮಾಡಿರುತ್ತಾರೆ. ಆ ಮೂಲಕ ಸಾರ್ವಜನಿಕರನ್ನು ದಿಕ್ಕುತಪ್ಪಿಸುವ ಕೆಲಸ ಮಾಡಿದ್ದಾರೆ.  ಈ ಕುರಿತ ವೀಡಿಯೋ ಚಿತ್ರಣವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. 

ಮಾನ್ಯ ಘನವೆತ್ತ ಮುಖ್ಯಮಂತ್ರಿಗಳ ವಿರುದ್ಧ ಈ ರೀತಿಯ ಆರೋಪ ಸರಿಯಲ್ಲ. ಆದ್ದರಿಂದ ಈ ಬಗ್ಗೆ ತಾವುಗಳು ಪರಿಶೀಲನೆ ನಡೆಸಿ ವಿನಾ ಕಾರಣ ಆರೋಪ ಮಾಡಿರುವ ಶಾಸಕ ಹರೀಶ್ ಪೂಂಜಾರವರ ವಿರುದ್ಧ ಕಾನೂನು ಕ್ರಮಕೈಗೊಂಡು ತನಿಖೆ ನಡೆಸಬೇಕೆಂದು ಈ ಮೂಲಕ ತಮ್ಮಲ್ಲಿ ಕೋರುತ್ತೇನೆ.

ನಿಯೋಗದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾಂತಲ ಗಟ್ಟಿ, ಚಂದ್ರಕಲಾ, ಜಿಲ್ಲಾ ಕಾಂಗ್ರೆಸ್ ಸದಸ್ಯೆ ಗೀತಾ ಅತ್ತಾವರ, ಮೀನಾ ಟೆಲ್ಲಿಸ್  ಉಪಸ್ಥಿತರಿದ್ದರು.