ಮಂಗಳೂರು: ಉತ್ತರ ಕನ್ನಡ ಜಿಲ್ಲೆ ಅಂಕೋಲದ ನಿವಾಸಿ ರಾಮಮೂರ್ತಿ ರಮಾನಂದ ನಾಯಕ್ (38) ಎಂಬವರು ನಗರದ ನಾಗುರಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಪಂಪ್‍ವೆಲ್‍ನಎಂಬೆಸಿ ಫ್ಲಾಝಾದಲ್ಲಿರುವ ಎಸ್.ಕೆ ಗ್ರೂಪ್ ಮಾರ್ಕೆಟಿಂಗ್ ಸಂಸ್ಥೆಯಲ್ಲಿ ಸೇಲ್ಸ್ ಎಗ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದರು. 2022 ರ ಸೆಪ್ಟೆಂಬರ್ 25 ರಂದು ಕೆಲಸಕ್ಕೆಂದು ಕಛೇರಿಯಿಂದ ಹೋದವರು ಕಾಣೆಯಾಗಿದ್ದು, ಈ ಬಗ್ಗೆ ಕಂಕನಾಡಿ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾದವರ ಚಹರೆ : ಎತ್ತರ6 ಅಡಿ , ಬಿಳಿ ಮೈ ಬಣ್ಣ, ಸಾಧಾರಣ ಶರೀರ, ದುಂಡು ಮುಖ,ಕಪ್ಪು ತಲೆ ಕೂದಲು ಹೊಂದಿರುತ್ತಾರೆ. ಕಾಣೆಯಾದ ದಿನ ನೀಲಿ ಬಣ್ಣದ ಶರ್ಟ್, ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದರು. ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆ  ಮಾತನಾಡುತ್ತಾರೆ.

ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಕಂಕನಾಡಿ ನಗರ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.