ತಮಿಳುನಾಡಿನ ನೀಲಗಿರಿ ಪ್ರಾಂತ್ಯದ ಕೂನೂರು ಬಳಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದರಿಂದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸಹಿತ 12 ಮಂದಿ ಮರಣ ಹೊಂದಿದ್ದಾರೆ.

ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ಸೇರಿ 13 ಜನರು ಹೆಲಿಕಾಪ್ಟರ್‌ನಲ್ಲಿ ಕೊಯಮುತ್ತೂರು ಸೇನಾ ಕಾರ್ಯಕ್ರಮಕ್ಕೆ ಹೊರಟಿದ್ದರು.

ಮಧ್ಯಾಹ್ನ ಒಂದು ಗಂಟೆ ಹೊತ್ತಿಗೆ ಹೆಲಿಕಾಪ್ಟರ್ ಪತನವಾಗಿದೆ. ಬಿಪಿನ್ ರಾವತ್ ನೀಲಗಿರಿ ಆಸ್ಪತ್ರೆಯಲ್ಲಿ ಸಾವು ಕಂಡರೆ ಪತ್ನಿ ಸ್ಥಳದಲ್ಲೇ ಮಡಿದಿದ್ದರು. ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.