ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಇಲ್ಲಿ ಆಯೋಜಿಸಿದ್ದ ಕಲಾ ಸಿಂಚನ 2023ರ, ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಯಶಸ್ವಿಯಾಗಿ ನಡೆಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ ಜಿ ಶಿಬಿರಕ್ಕೆ ಭೇಟಿ ನೀಡಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಪ್ರದರ್ಶಿಸಲು ಇಂತಹ ಶಿಬಿರಗಳು ಉತ್ತಮ ವೇದಿಕೆಯಾಗಿದೆ. ಆ ನಿಟ್ಟಿನಲ್ಲಿ ಈ ಶಾಲೆಯ ಕಲಾ ಸಿಂಚನ -2023 ಬೇಸಿಗೆ ಶಿಬಿರ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಾ ಎಲ್ಲಾ ಮಕ್ಕಳಿಗೆ ಶುಭ ಹಾರೈಸಿದರು.
ಖ್ಯಾತ ಸಾಹಿತಿ ಜ್ಯೋತಿ ಗುರುಪ್ರಸಾದ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಕೊಂಡಳ್ಳಿ, ವಲ್ಡ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆಯನ್ನು ನಿರ್ಮಿಸಿರುವ ಅಂತಾರಾಷ್ಟ್ರೀಯ ಯೋಗ ಪಟು ಕೆ. ಅಶೋಕ್ ಕುಮಾರ್ , ಶಿಬಿರದ ನಿರ್ದೇಶಕರಾದ ಚಂದ್ರನಾಥ ಬಜಗೋಳಿಯವರು ಶಿಬಿರದ ಬಗ್ಗೆ ಸಂತಸ ವ್ಯಕ್ತಪಡಿಸಿ ಶುಭ ಹಾರೈಸಿದರು.
ಶಿಬಿರಾರ್ಥಿಗಳ ಎಲ್ಲಾ ಪೋಷಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಶೋಭಾ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯಯಿನಿ ಪ್ರತಿಮಾ ದೇವದಾಸ್ ಸ್ವಾಗತಿಸಿ, ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದ ಎಲ್ಲರನ್ನೂ ಸ್ಮರಿಸಿಕೊಂಡರು. ಶಿಕ್ಷಕ ದೇವದಾಸ್ ಕೆರೆಮನೆ ನಿರೂಪಿಸಿ ವಂದಿಸಿದರು.