ಮಂಗಳೂರು: ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ಬೆಂಗಳೂರಿನ ದಿ. ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ವತಿಯಿಂದ ನೀಡಲಾದ ಪ್ರತಿಷ್ಠಿತ ಕರುನಾಡ ಕರ್ನಾಟಕ  ರತ್ನ ಪ್ರಶಸ್ತಿಯನ್ನು ಡಾ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ  ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಸಹಕಾರ ರತ್ನ ಡಾ ಎಂ.ಎನ್.  ರಾಜೇಂದ್ರ ಕುಮಾರ್ ರಿಗೆ ಸೋಮವಾರ ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. 

ಸಹಕಾರ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಈ ನಾಡಿಗೆ ಸಲ್ಲಿಸಿರುವ ಅನುಪಮ ಸೇವೆಯನ್ನು  ಗುರುತಿಸಿ ಡಾ ರಾಜೇಂದ್ರ ಕುಮಾರ್ ರಿಗೆ ಈ ಪ್ರಶಸ್ತಿಯನ್ನು ಕರ್ನಾಟಕ ಸರಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ನೀಡಿ ಗೌರವಿಸಿದರು.  ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ನಿಟ್ಟೆ ಸಂತೋಷ್ ಹೆಗ್ಡೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಜಿ.ಆರ್.ವಿಶ್ವನಾಥ್, ರಾಜೀವ್ ಗಾಂಧಿ ಆರೋಗ್ಯ  ವಿಜ್ಞ್ಯಾನಗಳ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಡಾ. ಎಸ್.ಚಂದ್ರಶೇಖರ ಶೆಟ್ಟಿ ವಿಶ್ರಾಂತ ಪೊಲೀಸ್ ಮಹಾ ನಿರ್ದೇಶಕ ಬಿ.ಎನ್. ಗರುಡಾಚಾರ್ ಹಾಗೂ  ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಸ್ಥಾಪಕ ಅಧ್ಯಕ್ಷ ಶ್ರಾವಣ ಲಕ್ಷ್ಮಣ್ ಮತ್ತಿತರು ಉಪಸ್ಥಿತರಿದ್ದರು.