ಮಂಗಳೂರು: ರಾಜ್ಯ ಕಾರ್ಮಿಕ ಇಲಾಖೆಯ ವತಿಯಿಂದ ಅಸಂಘಟಿತ ವಲಯದ ಕಾರ್ಮಿಕರಿಗೆ ನೀಡಲಾಗುವ ಕಾರ್ಮಿಕ ಕಾರ್ಡ್ ಗಳನ್ನು ಪ್ರತಿ ವಾರ್ಡ್ ಮಟ್ಟದಲ್ಲೂ ಮಾಡಲು ಪಾಲಿಕೆ ಸದಸ್ಯರು ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಡೊಂಗರಕೇರಿ ಭುವನೇಂದ್ರ ಸಭಾಂಗಣದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಹಮ್ಮಿಕೊಂಡಿರುವ ಬಿಜೆಪಿ ಪಕ್ಷದ ಪಾಲಿಕೆ ಸದಸ್ಯರ ಮಾಹಿತಿ ಕಾರ್ಯಗಾರವನ್ನುದ್ಧೇಶಿಸಿ ಮಾತನಾಡಿದ ಶಾಸಕ ಕಾಮತ್, ಸರಕಾರದಿಂದ ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಕಾರ್ಮಿಕ ಕಾರ್ಡ್ ನೀಡಲಾಗುತ್ತಿದೆ. ಅದರಿಂದ ಕಾರ್ಮಿಕ ವರ್ಗದ ಜನರಿಗೆ ಬಹಳಷ್ಟು ಅನುಕೂಲಗಳಿದೆ. ಪಾಲಿಕೆ ಸದಸ್ಯರು ತಮ್ಮ ವಾರ್ಡಿನಲ್ಲಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಕಾರ್ಮಿಕ ಕಾರ್ಡಿಗೆ ಅರ್ಜಿ ಸಲ್ಲಿಸಲು ನೆರವಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ವಹಿಸಿಕೊಂಡರು. ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಕಾರ್ಮಿಕ ಅಧಿಕಾರಿ ವಿಲ್ಮಾ , ವೀರೇಂದ್ರ ಕುಮಾರ್ ಉಪಸ್ಥಿತರಿದ್ದರು.
ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ರೂಪಾ ಡಿ ಬಂಗೇರ ವಂದಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜಪ್ಪಿನಮೊಗರು, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರು ಹಾಗೂ ವಾರ್ಡ್ ಪ್ರಮುಖರು ಉಪಸ್ಥಿತರಿದ್ದರು.