ಮಂಗಳೂರು: ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದೇರೆಬೈಲ್ ದಕ್ಷಿಣ ವಾರ್ಡ್, ಕದ್ರಿ ಶಿವಭಾಗ್ ವಾರ್ಡ್, ಪದವು ಪಶ್ಚಿಮ ವಾರ್ಡಿನ ಶಕ್ತಿನಗರ ಹಾಗೂ ಕುಂಟಲ್ಪಾಡಿ ಪರಿಸರದಲ್ಲಿ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಅವರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.
ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು ಕ್ಷೇತ್ರದ ಹಾಗೂ ರಾಜ್ಯದ ಭವಿಷ್ಯ ನಿರ್ಧಾರವಾಗುವ ಕಾಲ ಸನ್ನಿಹಿತವಾಗಿದೆ. ಹಾಗಾಗಿ ನಾಡಿನ ಸಮಗ್ರ ಅಭಿವೃದ್ಧಿಗೆ ಭಾರತೀಯ ಜನತಾ ಪಾರ್ಟಿಯನ್ನು ಬೆಂಬಲಿಸಿ ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು..
ಬಿಜೆಪಿ ಪಕ್ಷದ ಪ್ರಮುಖರು, ಕಾರ್ಯಕರ್ತರು, ಉಪಸ್ಥಿತರಿದ್ದರು..