ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮೂಡಬಿದರೆ: ಭಾರತೀಯ ಜನತಾ ಪಕ್ಷದ ಮುಲ್ಕಿ ಮೂಡುಬಿದಿರೆ ಮಂಡಲದ ವತಿಯಿಂದ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ತಲೆದೋರಿರುವ ಮರಳು, ಕೆಂಪು ಕಲ್ಲುಗಳ ಕೊರತೆ, ಅದರಿಂದ ನಿರ್ಮಾಣ ಕ್ಷೇತ್ರದಲ್ಲಿ ಆಗುತ್ತಿರುವ ತೊಂದರೆಗಳ ಬಗ್ಗೆ ಜನಾಕ್ರೋಶ ಪ್ರತಿಭಟನೆಯನ್ನು ಕಿನ್ನಿಗೋಳಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಪ್ರತಿಭಟನೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್, ಮೂಡುಬಿದಿರೆ ಪುರಸಭಾ ಅಧ್ಯಕ್ಷೆ, ಮುಲ್ಕಿ, ಕಿನ್ನಿಗೋಳಿ, ಮೂಡುಬಿದಿರೆಗಳ ಬಿಜೆಪಿ ಮುಖಂಡರುಗಳು ಭಾಗವಹಿಸಿದ್ದರು.