ಮಂಗಳೂರು: ಬಜ್ಪೆಯ ಕಿನ್ನಿಪದವು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಗುರುವಾರ ಸಂಜೆ ರೌಡಿ ಶೀಟರ್‌ ಒಬ್ಬನ ಕೊಲೆ ನಡೆದಿರುವ ಬಗ್ಗೆ ವರದಿಯಾಗಿದೆ.

ಕೊಲೆಯಾದವನನ್ನು ರೌಡಿ ಶೀಟರ್‌ ಸುಹಾಸ್ ಶೆಟ್ಟಿ ಎಂದು ಗುರುತಿಸಲಾಗಿದೆ. ಈತ ಸುರತ್ಕಲ್‌ನ ಮುಹಮ್ಮದ್ ಫಾಝಿಲ್‌ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.

ತಂಡವೊಂದು ಸಾರ್ವಜನಿಕರ ಎದುರಲ್ಲೇ ತಲವಾರಿನಿಂದ ದಾಳಿ ನಡೆಸುತ್ತಿರುವ ವೀಡಿಯೊ ವೈರಲ್‌ ಆಗಿದೆ.

ಸುಹಾಸ್ ಶೆಟ್ಟಿ ವಿರುದ್ಧ ಮುಹಮ್ಮದ್ ಫಾಝಿಲ್‌ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದು, ಬಜ್ಪೆ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿ ಪೊಲೀಸರು ಬಿಗಿ ಭದ್ರತೆಯನ್ನು ಏರ್ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.