ಬಂಟ್ವಾಳ ವೆಲಂಕಣಿ ಮಾತೆ ದೇವಾಲಯ ಫರ್ಲ ಇದರ ವಾರ್ಷಿಕ ಮಹೋತ್ಸವವು ಡಿಸೆಂಬರ್ 08ರಂದು ನಡೆಯಿತು. ದಿವ್ಯ ಬಲಿ ಪೂಜೆಯ ಪ್ರಧಾನ ಗುರುಗಳಾಗಿ ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷ ರಾದ ಅತೀ ವಂದನೀಯ ರೆ.  ಡಾ.   ಅಲೋಶಿಯಸ್ ಪಾವ್ಲ್ ಡಿಸೋಜ ಅವರು ವ್ಯಕ್ತಿಗಳ ನಡುವೆ ಉತ್ತಮ ಬಾಂಧವ್ಯ ಬೆಳೆಸಲು ಪ್ರೀತಿ, ತ್ಯಾಗ ಮತ್ತು ಏಕತೆ ಯೊಂದಿಗೆ ದೇವರ ಅನುಗ್ರಹವು ಬೇಕು.ಇದಕ್ಕಾಗಿ ಪ್ರತಿದಿನ ಮಾತೆ ಮರಿಯಮ್ಮನ ಜಪಮಾಲೆಯನ್ನು ಪಠಿಸುವುದರಿಂದ ಇದನ್ನು ಗಳಿಸಬಹುದು ಎಂದು ತಮ್ಮ ಪ್ರಸಂಗದಲ್ಲಿ ನುಡಿದರು. 

ಬಂಟ್ವಾಳ ವಲಯದ ಹಾಗೂ ಪಾಲಟಾಯ್ನ್ ಸಭೆಯ ಧರ್ಮಗುರುಗಳು ಬಲಿಪೂಜೆಯಲ್ಲಿ ಭಾಗವಹಿಸಿದರು. ಫರ್ಲಾ ಧರ್ಮಕೇಂದ್ರದ ಧರ್ಮಗುರು ವಂದನೀಯ ಮಾರ್ಕ್ ಅರುಣ್ ಡಿಸೋಜ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು ಹಾಗೂ ಗೌರವಾರ್ಥವಾಗಿ ಆಶೀರ್ವದಿಸಿದ ಮೇಣದ ಬತ್ತಿಯನ್ನು ವಿತರಿಸಲಾಯಿತು. ಊರ, ಪರವೂರ ಅನೇಕ ಭಕ್ತರು ಭಾಗವಹಿಸಿದ್ದರು.