ಬಂಟ್ವಾಳ: ದ.ಕ. ಜಿಲ್ಲಾ ಬೆಳ್ತಂಗಡಿ ತಾಲೂಕಿನ ಹೊಕ್ಕಾಡಿಗೋಳಿ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ದಶಂಬರ್ 2 ರಂದು ಪರಿಸರ ಸಂರಕ್ಷಣೆ ಹಾಗೂ ಪ್ಲಾಸ್ಟಿಕ್ ವರ್ಜದ ಮಾಹಿತಿ ಕಾರ್ಯಕ್ರಮ ನಡೆಯಿತು.

ಬೆಂಗಳೂರು ಸೂರ್ಯ ಫೌಂಡೇಶನ್ ನ ಜಿಲ್ಲಾ ಸಂಯೋಜಕ, ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ಸಂಪನ್ಮೂಲ ವ್ಯಕ್ತಿ ರಾಯಿ ರಾಜ ಕುಮಾರ ರು ಕಾರ್ಯಕ್ರಮ ನಡೆಸಿಕೊಟ್ಟರು. ಅವರು ತಮ್ಮ ಭಾಷಣದಲ್ಲಿ ಪಂಚಭೂತಗಳಿಂದ ರಚಿತ ಪರಿಸರವನ್ನು ಉಳಿಸಿಕೊಳ್ಳಲು ಪ್ಲಾಸ್ಟಿಕ್ ಅನ್ನು ಸಾಧ್ಯವಿದ್ದಷ್ಟು ತ್ಯಜಿಸಬೇಕು. ಪರಿಸರವನ್ನು ಶುದ್ಧವಾಗಿ ಇಟ್ಟುಕೊಳ್ಳಬೇಕು ಎಂದು ವಿವಿಧ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಶ್ನೆಗಳ ಮೂಲಕ ಮನವರಿಕೆ ಮಾಡಿಕೊಟ್ಟರು.

ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ಶಾಲಾ ಮುಖ್ಯ ಶಿಕ್ಷಕಿ ಸುಮಿತ್ರ ಸ್ವಾಗತಿಸಿದರು. ಶಿಕ್ಷಕಿ ಸಿಲ್ವಿಯಾ ಮಿರಾಂದಾ ವಂದಿಸಿದರು.