ಮಂಗಳೂರು,ಜು.11:  ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ವಸತಿ ನಿಲಯಗಳು, ಪೇಯಿಂಗ್ ಗೆಸ್ಟ್ ಗಳಿಗೆ ಜುಲೈ 16ರೊಳಗಾಗಿ ಅಗತ್ಯ ದಾಖಲೆಗಳನ್ನು ಬೆಳ್ತಂಗಡಿ ಪಟ್ಟಣ ಪಂಚಾಯಿತಿಗೆ ನೀಡಿ ಪರವಾನಿಗೆ ಪಡೆಯುವಂತೆ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.