ಬೆಳ್ತಂಗಡಿ ತಾಲೂಕಿನ ಸಮಸ್ತ ನಾಗರಿಕರಿಂದ ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆದ ಉಡುಪಿಯ ಭಾವೀ ಪರ್ಯಾಯ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪೌರಸನ್ಮಾನ ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಜಿಲ್ಲಾಧ್ಯಕ್ಷರಾದ ಡಾ. ಎಂ.ಪಿ ಶ್ರೀನಾಥ ಅವರು ಫಲಪುಷ್ಪ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಡಾ. ಉದಯಕುಮಾರ ಸರಳತ್ತಾಯ, ಎಸ್ ಡಿ ಎಂ ಸ್ವಾಯತ್ತ ಕಾಲೇಜಿನ ಆಡಳಿತಾಂಗ ಕುಲಸಚಿವ ಡಾ. ಶ್ರೀಧರ ಭಟ್, ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ. ಶರತ್ ಕುಮಾರ್, ಕಾಂಚನ ಎಸ್ ಡಿ ಎಂ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ  ರಮೇಶ್ ಮಯ್ಯ, ಗಮಕಿ ರಾಮಕೃಷ್ಣ ಭಟ್ ಬಳಂಜ, ಎಸ್ ಡಿ ಎಂ  ಪ. ಪೂ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು.