ಮಂಗಳೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಬೆಳ್ತಂಗಡಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಚ್ಚಿನ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಜಿನಿಯರಿಂಗ್ ಘಟಕ, ಮಂಗಳೂರು ಇವರ ವತಿಯಿಂದ ಆರೋಗ್ಯ ಇಲಾಖೆಯ ವಿವಿಧ ಕಟ್ಟಡ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮ ಜನವರಿ 18ರಂದು ಗಂಟೆಗೆ ಆಯೋಜಿಸಲಾಗಿದೆ. 

ಬೆಳಿಗ್ಗೆ 10 ಗಂಟೆಗೆ ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 11.15ಕ್ಕೆ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವಿವಿಧ ಕಟ್ಟಡ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನೆ ನಡೆಯಲಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. 

ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಫರೀದ್ ಉಪಸ್ಥಿತಿಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಶಾಸಕ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ.