ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಸರಕಾರದ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಗಡಿ ದಾಟಿರುವ ಹಿನ್ನೆಲೆಯಲ್ಲಿ ಮೂಡುಬಿದಿರೆ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯು ಸೋಮವಾರ ಶಕ್ತಿ-ಸಂಭ್ರಮಾಚರಣೆಯನ್ನು ನಡೆಸಿತು.
ಗ್ಯಾರಂಟಿ ಯೋಜನೆ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಮಾಜಿ ಅಧ್ಯಕ್ಷ ವಲೇರಿಯನ್ ಸಿಕ್ವೇರಾ ಪ್ರಮುಖರಾದ ರಾಜೇಶ್ ಕಡಲಕೆರೆ, ಚಂದ್ರಹಾಸ ಸನಿಲ್, ಸುರೇಶ್ ಪ್ರಭು, ಕೊರಗಪ್ಪ, ಮತ್ತಿತರರಿದ್ದರು.
ಇದೇ ಸಂದರ್ಭದಲ್ಲಿ ಸರ್ಕಾರಿ ಬಸ್ ಚಾಲಕ ,ನಿರ್ವಾಹಕರನ್ನು ಸನ್ಮಾನಿಸಲಾಯಿತು.