ಮಂಗಳೂರು: ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಈ ಕೆಳಕಂಡ ಯೋಜನೆಗಳಿಗೆ 2025-26ನೇ ಸಾಲಿನಲ್ಲಿ ಸಾಲ ಸಹಾಯಧನ ಸೌಲಭ್ಯ ಪಡೆಯಲು ಆನ್-ಲೈನ್/https://kccdclonline.karnataka.gov.in ಮೂಲಕ ಅರ್ಜಿಗಳನ್ನು ಸಲ್ಲಿಸುವ ಅವಧಿಯನ್ನು ಡಿಸೆಂಬರ್ 25ರವರೆಗೆ ವಿಸ್ತರಿಸಲಾಗಿದೆ.
ಯೋಜನೆಗಳ ವಿವರ: ಅರಿವು ವಿಧ್ಯಾಭ್ಯಾಸ ಸಾಲ ಯೋಜನೆ, ವಿದೇಶಿ ವಿಧ್ಯಾಭ್ಯಾಸ ಸಾಲಯೋಜನೆ, ಸ್ವಾಲಂಬಿ ಸಾರಥಿಯೋಜನೆ (ಟ್ಯಾಕ್ಸಿ ಮತ್ತು ಆಟೋರಿಕ್ಷಾ ವಾಹನ ಖರೀದಿಸಲು ಸಹಾಯಧನ ಯೋಜನೆ), ಶ್ರಮಶಕ್ತಿ ಯೋಜನೆ, ಶ್ರಮಶಕ್ತಿ ವಿಶೇಷ ಮಹಿಳಾ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಗಂಗಾಕಲ್ಯಾಣ ಯೋಜನೆ, ವ್ಯಾಪಾರ ಉದ್ದಿಮೆ/ ನೇರಸಾಲ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ, ಸಮುದಾಯ ಆಧಾರಿತ ಕೌಶಲ್ಯ ಅಭಿವೃದ್ದಿ ತರಬೇತಿಗಳು
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಗರದ ಪಾಂಡೇಶ್ವರದ 2ನೇ ಮಹಡಿಯ ಮೌಲಾನಾ ಅಜಾದ್ ಭವನದಲ್ಲಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ (ದೂರವಾಣಿ ಸಂಖ್ಯೆ: 0824-2951644 /ಸಹಾಯವಾಣಿ: 6360753075) ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.