ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಮಿಷನ್ ಉಡುಪಿ ಜಿಲ್ಲೆ ಹಾಗೂ ಮಣಿಪಾಲ ಮಾಹೆಯ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಕಮ್ಯುನಿಟಿ ಮೆಡಿಸಿನ್ ವಿಭಾಗ ಇವರುಗಳ ಸಹಯೋಗದಲ್ಲಿ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮದ ಸಮಗ್ರ ಪರಿಚಯ ಕಾರ್ಯಕ್ರಮವು ಫೆಬ್ರವರಿ 19 ರಂದು ಬೆಳಗ್ಗೆ 9.30 ಕ್ಕೆ ನಗರದ ಮಣಿಪಾಲ ಕೆ.ಎಂ.ಸಿಯ ಮೂರನೇ ಮಹಡಿಯ ಡಾ.ಟಿ.ಎಂ.ಎ ಪೈ ಆಡಿಟೋರಿಯಂನಲ್ಲಿ ನಡೆಯಲಿದೆ. 

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಉದ್ಘಾಟಿಸಲಿದ್ದು, ಮಣಿಪಾಲ ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಪ್ರೊ. ವೈಸ್ ಚಾನ್ಸಲರ್ ಡಾ.ಶರತ್ ಕೆ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗರತ್ನ, ಮಕ್ಕಳ ಆರೋಗ್ಯಾಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ. ಪದ್ಮರಾಜ್ ಹೆಗಡೆ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.