ಕಾರ್ಕಳ:  ಸರಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಎಲ್ಲ ವಿದ್ಯಾರ್ಥಿಗಳಿಗೆ ಗ್ರಾಹಕ ಮಾಹಿತಿ ಕಾರ್ಯಕ್ರಮ ಜೂನ್ 22 ರಂದು ಕಾಲೇಜು ಆವರಣದಲ್ಲಿ ನಡೆಯಿತು.

ಮುಖ್ಯ ಮಾಹಿತಿದಾರರಾಗಿ ಮಂಗಳೂರು ದ. ಕ. ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜತೆ ಕಾರ್ಯದರ್ಶಿ ,ರಾಜ್ಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಆಗಮಿಸಿದ್ದರು. ಅವರು ತಮ್ಮ ಭಾಷಣದಲ್ಲಿ ಗ್ರಾಹಕರ ಹಕ್ಕು , ಜವಾಬ್ದಾರಿಗಳು ಇತ್ಯಾದಿಯ ಕುರಿತು ತಿಳಿಸಿದರು. ಗ್ರಾಹಕನಿಗೆ ತೊಂದರೆಗಳಾದಲ್ಲಿ  ಪರಿಹಾರದ ಮಾರ್ಗೋಪಾಯಗಳ ಬಗ್ಗೆಯೂ ಮಾಹಿತಿ ನೀಡಿ ಹಲವಾರು ಉದಾಹರಣೆಗಳ ಮೂಲಕ ಮನದಟ್ಟು ಮಾಡಿಸಿದರು.

ಕಾಲೇಜಿನ ಪ್ರಾಂಶುಪಾಲೆ ಅಖಿಲಾ ಹೆಬ್ಬಾರ್ ಅವರು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಎಲ್ಲ ಉಪನ್ಯಾಸಕರು ಹಾಜರಿದ್ದು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು . ವಿದ್ಯಾರ್ಥಿ ಸಂಘದ ನಾಯಕ ಹುಲಗೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ವ್ಯವಹಾರ ಅಧ್ಯಯನ ವಿಭಾಗದ ಉಪನ್ಯಾಸಕಿ  ಅಶ್ವಿನಿ ಅವರು ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಹಾಜರಿದ್ದು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು .