ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗಿದ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸಿದ್ದರು. ದೂರ ಪ್ರಯಾಣದಿಂದ ಅನಾರೋಗ್ಯಕ್ಕೆ ತುತ್ತಾದ ಭಕ್ತಾದಿಗಳ ಆರೋಗ್ಯ ರಕ್ಷಣೆಗಾಗಿ ಶ್ರೀ ಕ್ಷೇತ್ರದ ವತಿಯಿಂದ ರೂ. 4,00,000/-(ನಾಲ್ಕು ಲಕ್ಷ) ಮೌಲ್ಯದ ಔಷಧಿಯನ್ನು ಡಿ. ವೀರೇಂದ್ರ ಹೆಗ್ಗಡೆಯವರ ಆದೇಶದಂತೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ನೀಡಲಾಗಿದೆ.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮೆಡಿಕಲ್ ಟ್ರಸ್ಟ್ (ರಿ.) ಮೂಲಕ ಆಸ್ಪತ್ರೆಯ ವೈದ್ಯೆ ಡಾ| ಮಂಜು ಇವರಿಗೆ ,ಮೆಡಿಕಲ್ ಟ್ರಸ್ಟ್ನ ಕಾರ್ಯದರ್ಶಿ  ಶಿಶುಪಾಲ್ ಪೂವಣಿಯವರು ಔಷಧಿಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಹಸ್ತಾಂತರಿಸಿದರು. ಶ್ರೀ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಹಾಗೂ ಸ್ಥಳೀಯ ಜನರಿಗೆ ಇದರಿಂದ ಹೆಚ್ಚಿನ ಪ್ರಯೋಜನವಾಗುವುದೆಂದು ಡಾ| ಮಂಜುರವರು ತಿಳಿಸಿದ್ದಾರೆ.