ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ.), ಜನಜಾಗೃತಿ ಪ್ರಾದೇಶಿಕ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ಯೋಜನೆಯಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಅನಿಲ್ ಕುಮಾರ್ ಎಸ್.ಎಸ್. ರವರ ಮಾರ್ಗದರ್ಶನದಲ್ಲಿ ನವಂಬರ್ 25 ರಂದು ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರ 78ನೇ ಹುಟ್ಟುಹಬ್ಬದ ಪ್ರಯುಕ್ತ ಉಜಿರೆ ನಗರದಲ್ಲಿರುವ ಎಲ್ಲಾ ವಿದ್ಯುತ್ ಕಂಬಗಳ ಸ್ವಚ್ಛತಾ ಶ್ರಮದಾನವನ್ನು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸ್ವಯಂಸೇವಕರಿಂದ ಬೆಳಿಗ್ಗೆ 9.30 ರಿಂದ ಸಂಜೆ 7.00 ರ ವರೆಗೆ ಹಮ್ಮಿಕೊಳ್ಳಲಾಗಿತ್ತು.



ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಘಟಕದ 50ಕ್ಕೂ ಮಿಕ್ಕಿದ ಶೌರ್ಯ ಸ್ವಯಂಸೇವಕರು ಭಾಗವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆ ನಡೆಸಿದ ಯೋಜನೆಯಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಅನಿಲ್ ಕುಮಾರ್ ಎಸ್.ಎಸ್. ರವರು ಮಾತನಾಡಿ ‘ಪೂಜ್ಯರ ಹುಟ್ಟು ಹಬ್ಬದ ಪ್ರಯುಕ್ತ ರಾಜ್ಯದ ಎಲ್ಲಾ ಕಡೆಗಳಲ್ಲಿ ವಿವಿಧ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಮತ್ತು ಸ್ವಚ್ಚತಾ ಶ್ರಮದಾನವನ್ನು ಶೌರ್ಯ ಸ್ವಯಂಸೇವಕರ ಮೂಲಕ ನಡೆಸಲಾಗುತ್ತಿದ್ದು, ಸಾಂಕೇತಿಕವಾಗಿ ಉಜಿರೆಯಲ್ಲಿ ವಿದ್ಯುತ್ ಕಂಬಗಳ ಸ್ವಚ್ಛತಾ ಶ್ರಮದಾನದ ಮೂಲಕ ಚಾಲನೆ ನೀಡಲಾಗಿದೆ. ರಾಜ್ಯಾದ್ಯಂತ 10 ಸಾವಿರಕ್ಕೂ ಮಿಕ್ಕಿದ ಶೌರ್ಯ ಸ್ವಯಂಸೇವಕರು 4.50 ಲಕ್ಷಕ್ಕೂ ಮಿಕ್ಕಿದ ವಿಪತ್ತು, ಸಾಮಾಜಿಕ ಸೇವೆಗಳನ್ನು ನೀಡಿ ಉತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ” ಎಂದು ತಿಳಿಸಿ ಇಂದಿನ ಕಾರ್ಯಕ್ರಮಕ್ಕೆ ಹಾಜರಾಗಿ ಸೇವೆ ನೀಡಿದ ಸರ್ವರಿಗೂ ಒಳಿತಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ. ಪಾೈಸ್, ವಿಪತ್ತು ನಿರ್ವಹಣೆ ಯೋಜನಾಧಿಕಾರಿಯಾಗಿರುವ ಜೈವಂತ್ ಪಟಗಾರ ಮತ್ತು ಕಿಶೋರ್ ಕುಮಾರ್, ಜನಜಾಗೃತಿ ವೇದಿಕೆಯ ಆಡಳಿತ ಯೋಜನಾಧಿಕಾರಿ ಮಾಧವ ಗೌಡ, ಬೆಳ್ತಂಗಡಿ ತಾಲೂಕು ಯೋಜನಾ ಕಛೇರಿಯ ಯೋಜನಾಧಿಕಾರಿ ಯಶೋಧರ ಕೆ., ಉಜಿರೆಯ ಒಕ್ಕೂಟದ ಅಧ್ಯಕ್ಷರು ಉಪಸ್ಥಿತರಿದ್ದರು.