ಉಜಿರೆ: ಧರ್ಮಸ್ಥಳದಲ್ಲಿ ಗುರುವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 74ನೆ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

ದೇವಳದ ನೌಕರರು, ಊರಿನ ನಾಗರಿಕರು, ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ,  ಆಪ್ತರು, ಅಭಿಮಾನಿಗಳು ಹಾಗೂ ಭಕ್ತರು ಶ್ರದ್ಧಾ-ಭಕ್ತಿಯಿಂದ ಹೆಗ್ಗಡೆಯವರಿಗೆ ಜನ್ಮ ದಿನದ ಶುಭಾಶಯ ಅರ್ಪಿಸಿದರು.

ಮೂಡಬಿದ್ರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೆಗ್ಗಡೆ ದಂಪತಿಗಳಿಗೆ ವಿಶೇಷ ಪ್ರಸಾದ ನೀಡಿ ಶುಭ ಹಾರೈಸಿದರು.

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಪಟ್ನಶೆಟ್ಟಿ ಸುಧೇಶ್ ಕುಮಾರ್ ಜೈನ್, ಬಸದಿ ಮುಕ್ತೇಸರರು ಆನಡ್ಕ ದಿನೇಶ್ ಕುಮಾರ್ ಉಪಸ್ಥಿತರಿದ್ದರು.

ಬ್ಯಾಂಕ್ ಆಫ್ ಬರೋಡಾದ ಪ್ರಾದೇಶಿಕ ಪ್ರಬಂಧಕ ದೇವಿಪ್ರಸಾದ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹನಾಯಕ್, ದಕ್ಷಿಣ ಕನ್ನಡ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್. ಡಿ. ಸಂಪತ್ ಸಾಮ್ರಾಜ್ಯ, ಶಿರ್ತಾಡಿ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಶರತ್‍ಕೃಷ್ಣ ಪಡ್ವೆಟ್ನಾಯ ಮೊದಲಾದವರು ಭಕ್ತಿಪೂರ್ವಕ ಶುಭಾಶಯಗಳನ್ನು ಅರ್ಪಿಸಿದರು.