ಮಂಗಳೂರು:  ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕರಾವಳಿಯಲ್ಲಿ ಪಕ್ಷದ ಶಕ್ತಿ ಹೆಚ್ಚಿಸಬೇಕು. ವಿಧಾನ ಸಭೆಯಲ್ಲಿ ಹೆಚ್ಚಿನ ಶಾಸಕರು ಇಲ್ಲಿಂದ ಗೆದ್ದುಬರಬೇಕು. ಮುಖ್ಯವಾಗಿ ಈ ಭಾಗದ ಅಭಿವೃದ್ಧಿಯಾಗಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರ ಅಧಿಕಾರಕ್ಕೆ ಬರಲಿದೆ. ಇದಕ್ಕಾಗಿ ನಾವೆಲ್ಲರೂ ಶ್ರಮವಹಿಸಿ ದುಡಿಯಬೇಕು. ವಿಧಾನ ಸಭಾ ಚುನಾವಣೆ ಸಮೀಪವಿದ್ದು, ಮುಂದಿನ ದಿನಗಳು ಬಹಳ ಕಡಿಮೆ ಇವೆ. ಕಾರ್ಯಕ್ರಮಗಳು ಹೆಚ್ಚಿವೆ. ಹಾಗಾಗಿ ಪ್ರತಿಯೊಂದು ಕ್ಷಣ ಮಹತ್ವದ್ದು. ರಾಜ್ಯ ಮತ್ತು ಕೇಂದ್ರದಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಾಗಿದೆ. ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿ ಕಾಂಗ್ರೆಸ್ ನೀಡಿದ ಕೊಡುಗೆಗಳನ್ನು ಪ್ರಚಾರ ನಡೆಸಬೇಕು ಎಂದು ಕರೆ ನೀಡಿದರು.

ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಜಿಲ್ಲೆಯಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದ್ದು, ಈ ವೇಳೆ ಕರಾವಳಿ ಪ್ರದೇಶವನ್ನು ಅಭಿವೃದ್ಧಿಪಡಿಸಬೇಕೆಂಬ ಉದ್ದೇಶದಿಂದ 13 ಪ್ರಣಾಳಿಕೆಯನ್ನು ಬಿಗುಡಗೆಗೊಳಿಸಲಾಗಿದೆ. ಪ್ರಜಾಧ್ವನಿ ಯಾತ್ರೆ 20 ಜಿಲ್ಲೆಗಳಲ್ಲಿ ಮೈಕ್ರೊಲೆವೆಲ್ ಕಾರ್ಯಕ್ರಮ ನಡೆದಿದೆ.   ಇವತ್ತಿನಿಂದ ಮತ್ತೆ ವಿಧಾನ ಸಭಾ ಕ್ಷೇತ್ರದಲ್ಲಿ ವಿಧಾನ ಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉತ್ತರ ಕರ್ನಾಟಕದಲ್ಲಿ,  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದಕ್ಷಿಣ ಕರ್ನಾಟಕದಲ್ಲಿ ಪ್ರಜಾಧ್ವನಿ ಯಾತ್ರೆಯನ್ನು ಪ್ರಾರಂಭಿಸಿದ್ದಾರೆ. ಕರಾವಳಿ ಮಲೆ ನಾಡು ಭಾಗಕ್ಕೆ ಪ್ರತ್ಯೇಕ ಪ್ರಣಾಳಿಕೆ ರಚಿಸಲಾಗಿದ್ದು, ಪರಿಸ್ಥಿತಿಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದೆ ಎಂದು ತಿಳಿಸಿದರು. 

ಫೆ.5ರಿಂದ ‘ಕರಾವಳಿ ಪ್ರಜಾಧ್ವನಿ ಯಾತ್ರೆ’ ಹಮ್ಮಿಕೊಳ್ಳಲಾಗಿದ್ದು, ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಪ್ರಾರಂಭಗೊಳ್ಳಲಿದೆ. ಸಾರ್ವಜನಿಕ ಸಭೆಯಲ್ಲಿ ಜಿಲ್ಲೆಗೆ ನೀಡಿದ 13 ಪ್ರಣಾಳಿಕೆಯನ್ನು ಬ್ಲಾಕ್ ಮಟ್ಟದ ಮೂಲಕ ಗ್ರಾಮೀಣ ಭಾಗದ ಜನ ಸಾಮಾನ್ಯರಿಗೆ ತಿಳಿಸಿ, ಸರ್ಕಾರದ ವೈಫಲ್ಯಗಳನ ಬಗ್ಗೆ ಜಾಗೃತಿ ಮೂಡಿಸಬೇಕು. ಪ್ರತಿ ಕ್ಷೇತ್ರದ ಕಾರ್ಯಕ್ರಮದ ಯಶ್ವಿಗೊಳಿಸಲು ನಾಯಕರು, ಕಾರ್ಯಕರ್ತರು ಹೆಚ್ಚಿನ  ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕರಾದ ಯು.ಟಿ.ಖಾದರ್, ಮಂಜುನಾಥ ಭಂಡಾರಿ, ಮಾಜಿ ಸಂಸದ ಬಿ.ಇಬ್ರಾಹಿಂ, ಮಾಜಿ ಶಾಕರಾದ ಶಕುಂತಲಾ ಶೆಟ್ಟಿ, ಮೊಯ್ದೀನ್ ಬಾವ, ಜೆ.ಆರ್.ಲೋಬೊ, ಐವನ್ ಡಿಸೋಜಾ, ಕೆಪಿಸಿಸಿ ಉಪಾಧ್ಯಕ್ಷ ಪಿ.ವಿ. ಮೋಹನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು, ಕೆಪಿಸಿಸಿ ಸದಸ್ಯರು, ಸಂಯೋಜಕರು, ಉಸ್ತುವಾರಿಗಳು, ಮ.ನ.ಪಾ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ  ವಂದಿಸಿದರು.