ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ಜಿಲ್ಲೆ ಸಹಿತ ಕರ್ನಾಟಕವನ್ನು ಹಿಂಗಾರು ಮಳೆ ಪ್ರವೇಶಿಸಲಿದೆ. ಎರಡು ದಿನ ಸತತ ಮಳೆಯ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ದ. ಕ. ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಯಾನೇ ಹಳದಿಯೆಚ್ಚರ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ ಮತ್ತು ನಗರ, ಚಿಕ್ಕ ಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಆಗಿದೆ.