ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಬೆಳ್ತಂಗಡಿ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿಇವರ ಸಹಯೋಗದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಇವರ ಜನ್ಮದಿನೋತ್ಸವದ ನೆನಪಿನಲ್ಲಿ  ದಕ್ಷಿಣ ಕನ್ನಡ ಜಿಲ್ಲಾ  ಮಟ್ಟದ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದಶಿಕ್ಷಕರ ದಿನಾಚರಣೆ ಸೆಪ್ಟೆಂಬರ್ 5 ರಂದು ಬೆಳಿಗ್ಗೆ 10 ಗಂಟೆಗೆ  ಬೆಳ್ತಂಗಡಿಸಂತೆ ಕಟ್ಟೆಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಲಿದೆ.

ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತುಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.  ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆ ವಹಿಸಲಿದ್ದಾರೆ.