ಉಡುಪಿ: ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಲಯನ್ಸ್ ಕ್ಲಬ್ ವತಿಯಿಂದ ಸುಮಾರು ಐವತ್ತು ಸಾವಿರ ರೂಪಾಯಿ ಮೊತ್ತದ ವಾಷ್ ಬೇಸಿನ್ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ರಾಜ್ಯಪಾಲ ಲಯನ್ ಡಾಕ್ಟರ್ ಎಮ್. ಕೆ. ಭಟ್, ಲಯನ್ಸ್ ನಂತಹ ಸಂಘ ಸಂಸ್ಥೆಗಳಿಂದ ಸಿಗುತ್ತಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು, ಸತತ ಅಧ್ಯಯನ ಶೀಲರಾಗಬೇಕು ಎಂದು ಹೇಳುತ್ತಾ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ದಿವಾಕರ್ ಶೆಟ್ಟಿ ಕಾರ್ಯದರ್ಶಿಗಳಾದ ರವಿರಾಜ್ ಯು ಎಸ್. ಕಟ್ಟಡ ಸಮಿತಿಯ ಕಾರ್ಯಾಧ್ಯಕ್ಷ ರಾಜಗೋಪಾಲ್ ಮತ್ತು ಲಯನ್ ಸದಸ್ಯರು, ಶಾಲೆಯ ಎಸ್.ಡಿ.ಎಮ್.ಸಿ ಗೌರವಾಧ್ಯಕ್ಷೆ ತಾರಾದೇವಿ, ನಿವೃತ್ತ ಶಿಕ್ಷಕಿ ಜಯಲಕ್ಷ್ಮಿ, ಉಪನ್ಯಾಸಕ ಮತ್ತು ಅಧ್ಯಾಪಕ ವರ್ಗದವರು ಉಪಸ್ಥಿತರಿದ್ದರು, ಮುಖ್ಯ ಶಿಕ್ಷಕಿ ಇಂದಿರಾ ಧನ್ಯವಾದಗೈದರು.