ಮಂಗಳೂರು: ನಗರದ ಪುರಭವನದಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಡಾ. ಅರವಿಂದ ಶ್ಯಾನಭಾಗರವರು ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಮಂಗಳೂರಿನ ರಸ್ತೆ ಅವ್ಯವಸ್ಥೆಗಳ ಬಗ್ಗೆ ಗಂಭೀರ ಚರ್ಚೆ ನಡೆಸಿದರು. ಸಾರ್ವಜನಿಕರ ಸಾವಿಗೆ ಕಾರಣವಾಗಿರುವ ಹದಗೆಟ್ಟ ರಸ್ತೆ ದುರಸ್ತಿಯನ್ನು ತುರ್ತಾಗಿ ಕೈಗೊಳ್ಳುವಂತೆ ಅರವಿಂದರು ಮನವಿ ಮಾಡಿದರು. ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಶ್ಯಾನಭಾಗರ ದೂರರ್ಜಿಯನ್ನು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ವರ್ಗಾಯಿಸಿ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ನಗರ ಪೊಲೀಸ್ ಆಯುಕ್ತ ಅನುಪಮ್ ಅರ್ಗವಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಮುಖಂಡರು ಜತೆಯಲ್ಲಿದ್ದರು.