ಮಂಗಳೂರು: ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ನಗರದ ಪತ್ರಿಕಾ ಭವನದಲ್ಲಿ ಪ್ರಸಾದ್ ನೇತ್ರಾಲಯ ಹಾಗೂ ಪ್ರಸಾದ್ ಮಲ್ಟಿ ಸ್ಪೆಷ್ಟಾಲಿಟಿ ಐ ಹಾಸ್ಪಿಟಲ್ ಸಹಯೋಗದಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಆಯೋಜಿಸಲಾದ ಉಚಿತ ನೇತ್ರ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಸದಾ ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು  ಎಂದು  ಅವರು ಹೇಳಿದರು. ರೋಟರಿ ಕ್ಲಬ್‌ನ ಮಾಜಿ ಗವರ್ನರ್ ಡಾ.ದೇವದಾಸ್ ರೈ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ  ಪಿ.ಬಿ.ಹರೀಶ್ ರೈ, ಪತ್ರಕರ್ತರ ಸಂಘದ

ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ  ಶೆಟ್ಟಿ ಬಾಳ, ಉಪಾಧ್ಯಕ್ಷ ಭಾಸ್ಕರ್  ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್.ಬಿ.ಎನ್., ಕಾರ್ಯಕಾರಿ ಸಮಿತಿ ಸದಸದ್ಯ ರಾಜೇಶ್ ದಡ್ಡಂಗಡಿ, ಪ್ರಸಾದ್ ನೇತ್ರಾಲಯದ ವೈದ್ಯ ಡಾ. ನಿರಂಜನ್, ಸಾರ್ವಜನಿಕ ಸಂಪರ್ಕಧಿಕಾರಿ ಯೂಸುಫ್  ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.