ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಸಂವಹನ ಮತ್ತು ಮಾಧ್ಯಮ ಸಮಿತಿ ಪ್ಯಾನಲಿಸ್ಟ್ ಆಗಿ ಪುತ್ತೂರು ತಾಲೂಕು ಪಂಚಾಯತ್ ಸದಸ್ಯರಾದ ಫಝಲ್ ಕೋಡಿಂಬಾಳ, ಮ.ನ.ಪಾ ಮಾಜಿ ಉಪಮಹಾಪೌರರಾದ ರಜನೀಶ್ ಅವರು ನೇಮಕಗೊಂಡಿದ್ದಾರೆ.


ಫಝಲ್

ರಜನೀಶ್

ಮಾಧ್ಯಮ ಮತ್ತು ಸಂವಹನ ಕ್ಷೇತ್ರದಲ್ಲಿರುವ ಅನುಭವ, ತಿಳುವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮರ್ಥ್ಯವನ್ನು ಗಮನಿಸಿ ಫಝಲ್  ಹಾಗೂ ರಜನೀಶ್ ಅವರನ್ನು ಕೆಪಿಸಿಸಿ ಮೀಡಿಯಾ ಪ್ಯಾನಲಿಸ್ಟ್ ಆಗಿ ನೇಮಿಸಿರುವುದಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.