ಚಿಕ್ಕಮಗಳೂರು ಜಿಲ್ಲೆಯ ಹಿರಿಯ ರಾಜಕಾರಣಿ ಡಿ. ಬಿ. ಚಂದ್ರೇಗೌಡ ನಿಧನರಾದರು. ಅವರು ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದಾಗಲೇ ರಾಜ್ಯದಲ್ಲಿ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

ಮುಂದೆ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. 1975ರಲ್ಲಿ ಉತ್ತರ ಪ್ರದೇಶದಲ್ಲಿ ಸೋತ ಇಂದಿರಾ ಗಾಂಧಿಯವರನ್ನು ರಾಜ್ಯದಲ್ಲಿ ಸ್ಪರ್ಧಿಸುವಂತೆ ದೇವರಾಜ ಅರಸು ಆಮಂತ್ರಿಸಿದ್ದರು. ಆಗ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಚಂದ್ರೇಗೌಡರು ಬಿಟ್ಟು ಕೊಟ್ಟಿದ್ದರು.

ಆಗಿನ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಭಾಗವಾಗಿದ್ದವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ಮತ್ತು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಗಳು.