ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮುಲ್ಕಿ ಮೂಡುಬಿದಿರೆ ಕ್ಷೇತ್ರದ ವಿವಿಧ ಪ್ರದೇಶಗಳಲ್ಲಿ ಅಭಿವೃದ್ಧಿಗೊಳ್ಳಲಿರುವ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭ ಏಪ್ರಿಲ್ 14 ರಂದು ನಡೆಯಿತು. ಅವುಗಳಲ್ಲಿ ಮುಖ್ಯವಾದವು 1 ಕೋಟಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂದಲೆ ಪೂಪಾಡಿಕಲ್ಲು ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ .
3 ಕೋಟಿ ರೂಪಾಯಿ ವೆಚ್ಚದಲ್ಲಿ ಬಳ್ಕುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಲೂರು ಕಾಂತಾಬಾರೆ-ಬೂದಾಬಾರೆ ಬಸ್ ನಿಲ್ದಾಣ ಬದಿಯಿಂದ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿ ಶಿಲಾನ್ಯಾಸ.
3 ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಪೆರ್ಮುದೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅತ್ರಾಡಿ ರಾಜ್ಯ ಹೆದ್ದಾರಿ ಕಟೀಲು ಕಡೆ ತಿರುವು, ರಸ್ತೆ ಅಭಿವೃದ್ಧಿ ಕಾಮಗಾರಿ.