ಮೂಡುಬಿದಿರೆ: ಸಂಪಿಗೆಯಲ್ಲಿ ನಿರ್ಮಾಣವಾಗುತ್ತಿರುವ ಪುತ್ತಿಗೆ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ ಪ್ರವೇಶದ್ವಾರದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ದೇವಾಲಯದ ಅನುವಂಶಿಕ ಆಡಳಿತ ಮುಕ್ತೇಸರ, ಮೂಡುಬಿದರೆ ಅರಮನೆಯ ಕುಲದೀಪ್ ಎಂ, ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್, ದೇವಾಲಯದ ಆಡಳಿತ ಮಂಡಳಿಯ ಸದಸ್ಯರು, ಅರ್ಚಕ ವರ್ಗ ಭಾಗವಹಿಸಿದ್ದರು.