ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ದನ್ನೂರ ಕೆ ಗ್ರಾಮದ ಮಸೀದಿ‌ ಮೇಲೆ ಕೇಸರಿ ಧ್ವಜ ಹಾರಿಸಿ ಪರಾರಿಯಾಗಿದ್ದ ನಾಲ್ವರನ್ನು ಡಿವೈಎಸ್‌ಪಿ ನ್ಯಾಮೇಗೌಡ ಮಾರ್ಗದರ್ಶನದಲ್ಲಿ ಬಸವಕಲ್ಯಾಣ ಗ್ರಾಮಾಂತರ ಪೋಲೀಸರು ಬಂಧಿಸಿದ್ದಾರೆ.

ಅಭಿಷೇಕ, ಕಲ್ಯಾಣಿ, ಸುಶೀಲ್, ವೀರೇಶ ಬಿರಾದಾರ ಬಂಧಿತರು. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.