ಉಜಿರೆ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭಾನುವಾರ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಬೀಡಿನಲ್ಲಿ (ಹೆಗ್ಗಡೆಯವರ ನಿವಾಸದಲ್ಲಿ) ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಔಪಚಾರಿಕ ಮಾತುಕತೆ ನಡೆಸಿದರು. ಹೆಗ್ಗಡೆಯವರು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಗೌರವಿಸಿದರು.
ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದರು. ಕನ್ಯಾಡಿ ರಾಮಕ್ಷೇತ್ರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಯವರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು. ಬಳಿಕ ಬೆಳ್ತಂಗಡಿಯಲ್ಲಿ ಬಿ.ಜೆ.ಪಿ. ಸಂಕಲ್ಪಯಾತ್ರೆಯಲ್ಲಿ ಭಾಗವಹಿಸಿದರು. ಆರಂಭದಲ್ಲಿ ಡಿ. ಹರ್ಷೇಂದ್ರ ಕುಮಾರ್ ಧರ್ಮಸ್ಥಳದಲ್ಲಿ ಮುಖ್ಯಮಂತ್ರಿಯವರನ್ನು ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.