ಉಡುಪಿ: ರಾಜ್ಯದ ಇತರೇ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿ ಜಿಲ್ಲೆಯ ಸರಕಾರಿ ನೌಕರರುಸರಕಾರಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನವಾಗುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದುಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ನೀಡುತ್ತಿದ್ದಾರೆ ಎಂದು ಶಾಸಕ ರಘುಪತಿ ಭಟ್ ಹೇಳಿದರು

ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ,ಜಿಲ್ಲಾ ಸರಕಾರಿ ನೌಕರರ ಸಂಘದ 2022 ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು

ಜಿಲ್ಲೆಯಲ್ಲಿ 7500 ಕ್ಕೂ ಅಧಿಕ ಸರಕಾರಿ ನೌಕರರಿದ್ದುಜಿಲ್ಲಾ ಸರಕಾರಿ ನೌಕರರ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಜಾಗ ನೀಡುವಲ್ಲಿ ಸರ್ಕಾರದ ಮಟ್ಟದಲ್ಲಿ ವಿಶೇಷವಾಗಿ ಪ್ರಯತ್ನಿಸುವುದಾಗಿ ತಿಳಿಸಿದ ಶಾಸಕರುಸರಕಾರಿ ನೌಕರರ ಪ್ರತಿಭಾವಂತ ಮಕ್ಕಳು ಅಖಿಲ ಭಾರತ ಮತ್ತು ಕರ್ನಾಟಕ ಆಡಳಿತ ಸೇವೆಯಲ್ಲಿ ಸೇರ್ಪಡೆಗೊಳ್ಳಬೇಕು  ಬಗ್ಗೆ ನೌಕರರು ತಮ್ಮ ಮಕ್ಕಳನ್ನು ಪ್ರೇರೇಪಿಸಬೆಕು ಎಂದರು.

ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ಮಾತನಾಡಿನೌಕರರು ತಮ್ಮ ಕರ್ತವ್ಯದ ಜೊತೆಗೆ ಮಕ್ಕಳಿಗೆ ಅಗತ್ಯ ಸಮಯ ಮೀಸಲಿಡಬೇಕು ಅವರ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ ಉನ್ನತ ಸಾಧನೆಗಳನ್ನು ಮಾಡುವಂತೆ ಪ್ರೇರೇಪಿಸಬೇಕು ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಆಧ್ಯಕ್ಷ ಷಡಾಕ್ಷರಿ ಮಾತನಾಡಿಸಂಘದ ವತಿಯಿಂದ ಎಸ್.ಎಸ್.ಎಲ್.ಪಿಮತ್ತು ಪಿಯುಸಿಯಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಪ್ರತಿವರ್ಷ 10000 ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ ಎಂದರುಸರ್ಕಾರಿ ನೌಕರರ ಅಭಿವೃಧಿಗಾಗಿ ಸಂಘಧ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಕಾರ್ಯನಿರ್ವಹಿಸುತ್ತಿದ್ದುಆಸ್ತಿ ಖರೀದಿ ವಾರ್ಷಿಕ ವರದಿ ಸಲ್ಲಿಸುವ ಅವಧಿಯನ್ನು ಮಾರ್ಚ್ 31 ಕ್ಕೆ ನಿಗಧಿಪಡಿಸಿದೆಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣವಾಗುವ ಅವಧಿಯನ್ನು 2023  ಡಿಸೆಂಬರ್ 31 ರೊಳಗೆ ವಿಸ್ತರಿಸಿದೆಕೆ.ಜಿ..ಡಿಯಲ್ಲಿ ಆನ್ಲೈನ್ ವ್ಯವಸ್ಥೆ ಮಾಡಿದೆನೌಕರರು ಮತ್ತು ಅವರ ಕುಟುಂಬ ವರ್ಗದವರ ಉಚಿತ ಚಿಕಿತ್ಸೆಗೆ ಫೆಬ್ರವರಿಯಲ್ಲಿ ಕ್ಯಾಷ್ ಲೆಸ್ ವ್ಯವಸ್ಥೆ ಜಾರಿಗೆ ಬರಲಿದ್ದು ಮೂಲಕ ಆರ್ಥಿಕ ಮಿತಿಯಿಲ್ಲದೇ ಚಿಕಿತ್ಸೆ ಪಡೆಯಬಹುದು ಎಂದರು.

ನೌಕರರು ಕರ್ತವ್ಯದ ಅವಧಿಯಲ್ಲಿ ಮರಣ ಹೊಂದಿದರೆ 1 ಕೋಟಿ ಪರಿಹಾರ ನೀಡುವ ಯೋಜನೆ ಜಾರಿಗೆ ತರಲಾಗುತ್ತಿದೆಮನೆ ಮತ್ತು ವಿದ್ಯಾಭ್ಯಾಸ ಸಾಲದಲ್ಲಿ ರಿಯಾಯತಿ ನೀಡುವ ಬಗ್ಗೆ ಸರಕಾರದೊಂದಿಗೆ ಚರ್ಚೆ ನಡೆಯುತ್ತಿದೆ ಎಂದರುಮಾರ್ಚ್ ನಲ್ಲಿ ಹೊಸ ವೇತನ ಆಯೋಗ ಜಾರಿಗೆ ಬಂದ ನಂತರ ಎನ್.ಪಿ.ಎಸ್. ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಕುರಿತಂತೆ ಕ್ರಮ ಕೈಗೊಳ್ಳಲಾಗುವುದು ಎಂದರು. 

ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು ಅಧ್ಯಕ್ಷತೆ ವಹಿಸಿದ್ದರು.

ರಾಜ್ಯ ಸಂಘದ ಉಪಾಧ್ಯಕ್ಷ ಮೋಹನ್ ಕುಮಾರ್ಜಿಲ್ಲಾ ಸಂಘದ  ಖಜಾಂಜಿ ಶರೀಫ್  ರೋಣಹೆಬ್ರಿ ತಾಲೂಕು ಸರ್ಕಾರಿ ನೌಕರರ ಸಂಘದ ಆಧ್ಯಕ್ಷ ಹರೀಶ್ ಪೂಜಾರಿಕಾರ್ಕಳದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಕೃಷ್ಣ , ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯಶೇರಿಗಾರ್ಹಾಗೂ ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸರಕಾರಿ ನೌಕರರ ಪ್ರತಿಭಾವಂತ ಮಕ್ಕಳು ಮತ್ತು ನಿವೃತ್ತಿ ಹೊಂದಿದ ನೌಕರರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಸ್ವಾಗತಿಸಿದರುಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ ವಂದಿಸಿದರುದಯಾನಂದ್ ಮತ್ತು ಮಂಜುಳಾ ಜಯಕರ್ ನಿರೂಪಿಸಿದರು