ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಚ್. ಕೆ. ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ  ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆಯನ್ನು  ಸಂಭ್ರಮದಿಂದ ಆಚರಿಸಲಾಯಿತು.  ಸಂಸ್ಥೆಯ ಪ್ರಾಂಶುಪಾಲರಾದ  ಪ್ರವೀಣ್ ಎ ಹಾಗೂ ಉಪ ಪ್ರಾಂಶುಪಾಲರಾದ ಆದಿತ್ಯ ವಟಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಮಹಾ ನಾಯಕನಿಗೆ ನಮನವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಕನ್ನಡ ಉಪನ್ಯಾಸಕರಾದ ರಮೇಶ್ ಎಂ ರವರು ಅಂಬೇಡ್ಕರ್ ರವರ ಹೋರಾಟ,  ಸಾಧನೆ, ಮತ್ತು ಸಂವಿಧಾನ ರಚನೆಯಲ್ಲಿ ಅವರ ಪಾತ್ರದ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕರಾದ ಲೋಕೇಶ್ ಪೂಜಾರಿ ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.