ಗುಜರಾತಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಾಜ್‌ಕೋಟ್‌ ಬಳಿ ಕಾರು ಒಂದು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು ಅದರಲ್ಲಿದ್ದ ಇಬ್ಬರು ನಾಪತ್ತೆಯಾಗಿದ್ದಾರೆ.

ರಾಜ್‌ಕೋಟ್ ಮತ್ತು ಜಾಮ್‌ನಗರ ಜಿಲ್ಲೆಗಳಲ್ಲಿ ಪ್ರವಾಹದಿಂದಾಗಿ ಜನಜೀವನ ತತ್ತರಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದೆ.

ಪ್ರವಾಹದಲ್ಲಿ ಸಿಲುಕಿದ್ದ 200 ಜನರನ್ನು ರಕ್ಷಣೆ ಮಾಡಲಾಗಿದೆ. ಪ್ರವಾಹದಲ್ಲಿ ಸಿಲುಕಿದವರನ್ನು ಎತ್ತಿ ಸುರಕ್ಷಿತ ಸ್ಥಳಕ್ಕೆ ತರಲು ಎರಡು ಹೆಲಿಕಾಪ್ಟರ್‌ಗಳನ್ನು ಬಳಸಲಾಯಿತು.